ಮಂಗಳೂರು: 2020-21ನೇ ಸಾಲಿನ ದ್ವಿತೀಯ ಬಿ.ಎಡ್ ಅಂತಿಮ ಪರೀಕ್ಷೆಯಲ್ಲಿ ಕೋಡಿಯ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯ 100% ಫಲಿತಾಂಶವನ್ನು ಪಡೆದಿದೆ.
69 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 3 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಬ್ಯಾರೀಸ್ ಶಿಕ್ಷಣ ಸಂಸ್ಥೆಗೆ ಕೀರ್ತಿಯನ್ನು ತಂದಿದ್ದಾರೆ.
ವಿದ್ಯಾರ್ಥಿಗಳ ಈ ಫಲಿತಾಂಶದಿಂದ ಹೆಮ್ಮೆಯಾಗಿದೆ ಎಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹಾಜಿ. ಕೆ. ಎಂ ಅಬ್ದುಲ್ ರೆಹಮಾನ್, ಸಂಚಾಲಕರಾದ ಸಯ್ಯದ್ ಮಹಮ್ಮದ್ ಬ್ಯಾರಿ, ಆಡಳಿತ ನಿರ್ದೇಶಕರು, ಪ್ರಾಂಶುಪಾಲರು ಹಾಗೂ ಬೋಧಕವೃಂದ ಶೈಕ್ಷಣಿಕವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು