ಮಂಗಳೂರು: 2019-20ನೇ ಸಾಲಿನ ಬಿ.ಎಡ್ ಪದವಿಯ ಅಂತಿಮ ಪರೀಕ್ಷೆಯಲ್ಲಿ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ದಿವ್ಯಶ್ರೀ. ಕೆ 8ನೇ ರ‍್ಯಾಂಕ್ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ 2021ರ ಫೆಬ್ರವರಿಯಲ್ಲಿ ನಡೆದ ಈ ಪರೀಕ್ಷೆಯಲ್ಲಿ ದಿವ್ಯಶ್ರೀ ಶೇಕಡಾ 85.75 ಅಂಕ ಗಳಿಸಿ 8ನೇ ರ‍್ಯಾಂಕ್ ಪಡೆದಿದ್ದಾರೆ.
ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ.ಕೆ ಅಬ್ದುಲ್ ರೆಹಮಾನ್, ಸಂಚಾಲಕರಾದ ಸಯ್ಯದ್ ಮಹಮ್ಮದ್ ಬ್ಯಾರಿ, ಆಡಳಿತ ನಿರ್ದೇಶಕರಾದ ದೋಮ ಚಂದ್ರಶೇಖರ್, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು, ವಿದ್ಯಾರ್ಥಿನಿ ದಿವ್ಯಶ್ರೀಯ ಸಾಧನೆಯನ್ನು ಪ್ರಶಂಸಿಸಿ ಅಭಿನಂದನೆ ಸಲ್ಲಿಸಿದ್ದಾರೆ.